ಶನಿವಾರ, ಜೂನ್ 12, 2021
23 °C

Covid-19 India Update: ಮಹಾರಾಷ್ಟ್ರದಲ್ಲಿ ಒಂದೇ ದಿನ 422 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 27,62,591 ಆಗಿದೆ. ಈವರೆಗೆ 53,005 ಮಂದಿ ಸಾವಿಗೀಡಾಗಿದ್ದು 20,34,680 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರ್ಲ್ಡೊಮೀಟರ್ ಅಂಕಿಅಂಶಗಳು ಹೇಳಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 422 ಸಾವು
ಮಹಾರಾಷ್ಟ್ರದಲ್ಲಿ ಮಂಗಳವಾರ  ಕೋವಿಡ್-19 ರೋಗದಿಂದ  422 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ ಇಲ್ಲಿ 20,687 ಮಂದಿ ಮೃತಪಟ್ಟಿದ್ದಾರೆ.  ಕಳೆದ 24 ಗಂಟೆಗಳಲ್ಲಿ 11,119 ಹೊಸ ಪ್ರಕರಣಗಳು ವರದಿ ಆಗಿದ್ದು ಸೋಂಕಿತರ ಸಂಖ್ಯೆ 6,15,477ಕ್ಕೇರಿದೆ. 9,356 ಮಂದಿ ಚೇತರಿಸಿಕೊಂಡಿದ್ದು ಈವರೆಗೆ  4,37,870 ಮಂದಿ ಈವರೆಗೆ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 1,374 ಹೊಸ ಪ್ರಕರಣಗಳು ವರದಿ ಆಗಿದ್ದು  ಸೋಂಕಿತರ ಸಂಖ್ಯೆ 1.54ಕ್ಕೇರಿದೆ, ಇವತ್ತು 12 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 4,226 ಆಗಿದೆ.

ಗುಜರಾತಿನಲ್ಲಿ 1,126 ಹೊಸ ಪ್ರಕರಣಗಳು ದಾಖಲಾಗಿದ್ದು  ಸೋಂಕಿತರ ಸಂಖ್ಯೆ 80942ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 20 ಸಾವು ಸಂಭವಿಸಿದ್ದು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ  2,822ಕ್ಕೆ ತಲುಪಿದೆ.
ಚಂಡೀಗಡದಲ್ಲಿ 89 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 2305ಕ್ಕೇರಿದೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ  53,860 ಆಗಿದ್ದು ಈವರೆಗೆ  121 ಮಂದಿ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದೇ ದಿನ  77 ಮಂದಿ ಸಾವಿಗೀಡಾಗಿದ್ದಾರೆ. 4,336 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1,62,434ಕ್ಕೇರಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು