ಭಾನುವಾರ, ನವೆಂಬರ್ 29, 2020
21 °C

Covid-19 Update India: ಮಹಾರಾಷ್ಟ್ರದಲ್ಲಿ 80,221 ಸಕ್ರಿಯ ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌ನಲ್ಲಿ ಕೊರೊನಾ ವೈರಸ್‌ ಸೋಂಕು ಪರೀಕ್ಷೆ ನಡೆಸುತ್ತಿರುವುದು–ಸಂಗ್ರಹ ಚಿತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯಂತ 5,011 ಹೊಸ ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿದ್ದು, 6,608 ಸೋಂಕಿತರು ಚೇತರಿಸಿಕೊಂಡಿದ್ದಾರೆ. 

ಮಹಾರಾಷ್ಟ್ರದಲ್ಲಿ ಈ ವರೆಗೆ ಒಟ್ಟು 17,57,520 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 80,221 ಸಕ್ರಿಯ ಪ್ರಕರಣಗಳಿವೆ. 46,202 ಸೋಂಕಿತರು ಮೃತಪಟ್ಟಿದ್ದಾರೆ. 

ಕೇರಳದಲ್ಲಿ ಬುಧವಾರ ಒಂದೇ ದಿನಕ್ಕೆ 6,419 ಪ್ರಕರಣಗಳು ದಾಖಲಾಗಿದ್ದು, ಒಟ್ಟು 4,68,460 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 

69,394 ಸಕ್ರಿಯ ಪ್ರಕರಣಗಳಿವೆ ಎಂದು ಕೇರಳ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  

ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದಾದ್ಯಂತ 3,668 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 54 ಸೋಂಕಿತರು ಮೃತಪಟ್ಟಿದ್ದಾರೆ. 26,296 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,791 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 21 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,65,931ಕ್ಕೆ ಏರಿಕೆಯಾಗಿದೆ. ಒಟ್ಟಾರೆ 11,578 ಜನರು ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಮತ್ತೆ 30 ಸಾವಿರ ದಾಟಿದೆ. 38,617 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 474 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 89,12,908 ತಲುಪಿದ್ದು, ಈ ಪೈಕಿ 1,30,993 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 44,739 ಮಂದಿ ಗುಣಮುಖರಾಗಿದ್ದು, ಒಟ್ಟು 83,35,110 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಪ್ರಸ್ತುತ ಭಾರತದಲ್ಲಿ 4,46,805 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 70,191, ಮಹಾರಾಷ್ಟ್ರದಲ್ಲಿ 82,904 ದೆಹಲಿಯಲ್ಲಿ 42,004, ಕರ್ನಾಟಕದಲ್ಲಿ 25,342, ಪಶ್ಚಿಮ ಬಂಗಾಳದಲ್ಲಿ 27,111 ಸಕ್ರಿಯ ಪ್ರಕರಣಗಳಿವೆ.

ಐಸಿಎಂಆರ್‌ ಪ್ರಕಾರ, ದೇಶದಾದ್ಯಂತ 12,74,80,186 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌–19 ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ಒಂದೇ ದಿನ 9,37,279 ಪರೀಕ್ಷೆಗಳನ್ನು ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು