ನವದೆಹಲಿ: ಶುಕ್ರವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್–19 ದೃಢಪಟ್ಟ 43,082 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 93,09,788ಕ್ಕೆ ಏರಿಕೆಯಾಗಿದೆ.

ಒಟ್ಟು ಪ್ರಕರಣಗಳ ಪೈಕಿ 87,18,517 ಮಂದಿ ಗುಣಮುಖರಾಗಿದ್ದಾರೆ ಹಾಗೂ ಈವರೆಗೂ 1,35,715 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,55,555 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 39,379 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ ಇದೇ ಅವಧಿಯಲ್ಲಿ 492 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಿಂದ ತಿಳಿದು ಬಂದಿದೆ.

ಐಸಿಎಂಆರ್ ಪ್ರಕಾರ, ದೇಶದಲ್ಲಿ ಒಟ್ಟು 13,70,62,749 ಗಂಟಲು ದ್ರವ ಮಾದರಿಗಳಿಗೆ ಕೋವಿಡ್ –19 ಪರೀಕ್ಷೆ ಮಾಡಲಾಗಿದೆ. ಗುರುವಾರ ಒಂದೇ ದಿನ 11,31,204 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ 87,014 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ 64,615, ದೆಹಲಿಯಲ್ಲಿ 38,734 ಹಾಗೂ ಪಶ್ಚಿಮ ಬಂಗಾಳದಲ್ಲಿ 24,670 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.