ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಅಲೆ ಎದುರಿಸಲು ಸಿದ್ಧತೆ ಕೈಗೊಳ್ಳಲು ಮಾಯಾವತಿ ಸಲಹೆ

ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಸಲಹೆ
Last Updated 18 ಜೂನ್ 2021, 9:00 IST
ಅಕ್ಷರ ಗಾತ್ರ

ಲಖನೌ: ಕೋವಿಡ್‌–19 ಮೂರನೇ ಅಲೆ ಎದುರಿಸಲು ಸರ್ಕಾರಗಳು ಮುಂಚಿತವಾಗಿಯೇ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದ್ದಾರೆ.

ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಸಿದ್ಧತೆಗಳು ಅಗತ್ಯ. ಹೀಗಾಗಿ, ಸರ್ಕಾರಗಳು ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಸ್ಥಳದಲ್ಲಿ ಲಸಿಕೆ ಲಭ್ಯವಾಗುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಇದರಿಂದ, ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಕ್ರಮಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್‌–19ನಿಂದ ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ನೆರವು ನೀಡಲು ಮುಂದಾಗಬೇಕು. ಜತೆಗೆ, ಆರ್ಥಿಕತೆಗೆ ಪುನಃಶ್ಚೇತನ ನೀಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT