ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಈಗಾಗಲೇ ಕೋವಿಡ್‌ ಮೂರನೇ ಅಲೆ ಶುರುವಾಗಿದೆ: ಸಿಎಂ ನಿತೀಶ್‌ ಕುಮಾರ್‌

Last Updated 29 ಡಿಸೆಂಬರ್ 2021, 6:10 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ಕೋವಿಡ್‌–19 ಸಾಂಕ್ರಾಮಿಕದ ಮೂರನೇ ಅಲೆಯು ಈಗಾಗಲೇ ಆರಂಭವಾಗಿದೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಬಿಹಾರದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 47 ಹೊಸ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಸರ್ಕಾರವು ದೇಶದಲ್ಲಿ ಕೋವಿಡ್‌ ಮೂರನೇ ಅಲೆ ಆರಂಭವಾಗಿರುವುದನ್ನು ಖಚಿತ ಪಡಿಸದಿರುವ ಹಿನ್ನೆಲೆಯಲ್ಲಿ ನಿತೀಶ್‌ ಅವರ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ.

ಭಾರತೀಯ ವೈದ್ಯಕೀಯ ಸಂಘದ (ಐಎಂಎ) 96ನೇ ರಾಷ್ಟ್ರೀಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿರುವ ನಿತೀಶ್‌ ಕುಮಾರ್‌ ಅವರು ಕೋವಿಡ್‌–19 ಮೂರನೇ ಅಲೆಯ ಕುರಿತು ಪ್ರಸ್ತಾಪಿಸಿದ್ದಾರೆ. ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯ ಸರ್ಕಾರ ಸಕಲ ರೀತಿಯಲ್ಲೂ ಸಜ್ಜಾಗಿದೆ, ' ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳ ಅನ್ವಯ ಆರೋಗ್ಯ ಇಲಾಖೆಯು ಆಸ್ಪತ್ರೆಗಳಲ್ಲಿ ಸೌಲಭ್ಯಗಳನ್ನು ಉನ್ನತೀಕರಿಸುವ ಕಾರ್ಯದಲ್ಲಿ ನಿರತವಾಗಿದೆ' ಎಂದಿದ್ದಾರೆ.

ಬಿಹಾರದಲ್ಲಿ ಈವರೆಗೂ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ದಾಖಲಾಗಿಲ್ಲ. ಈಗಾಗಲೇ ನೆರೆಯ ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ರೀತಿಯ ನಿರ್ಬಂಧಗಳನ್ನು ಜಾರಿಗೊಳಿಸುವ ಯೋಚನೆ ಇಲ್ಲ ಎಂದು ನಿತೀಶ್‌ ಕುಮಾರ್ ಇತ್ತೀಚೆಗೆ ಪ್ರತಿಕ್ರಿಯಿಸಿದ್ದರು.

24 ಗಂಟೆಗಳಲ್ಲಿ ದೇಶದಲ್ಲಿ 9,195 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ವರೆಗೆ 781 ಓಮೈಕ್ರಾನ್‌ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT