ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಚೇತರಿಸಿಕೊಂಡವರಿಗೆ ಮೂರು ತಿಂಗಳ ಬಳಿಕ ಲಸಿಕೆ ಸೂಕ್ತ: ಸರ್ಕಾರ

ಸೋಂಕಿನಿಂದ ಚೇತರಿಸಿಕೊಂಡವರಿಗೆ ಮೂರು ತಿಂಗಳ ಬಳಿಕ ಲಸಿಕೆ ಸೂಕ್ತ
Last Updated 19 ಮೇ 2021, 12:24 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರು ಮೂರು ತಿಂಗಳ ಬಳಿಕ ಲಸಿಕೆ ಹಾಕಿಸಿಕೊಳ್ಳುವುದು ಸೂಕ್ತ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಹಾಕಿಸಿಕೊಂಡವರಿಗೆ ಸೋಂಕು ತಗುಲಿದರೆ, ಅವರೂ ಸಹ ಸೋಂಕಿನಿಂದ ಚೇತರಿಸಿಕೊಂಡು ಮೂರು ತಿಂಗಳ ನಂತರ ಎರಡನೇ ಡೋಸ್‌ ಹಾಕಿಸಿಕೊಳ್ಳುವಂತೆ ಕೋವಿಡ್‌ ಲಸಿಕೆ ನಿರ್ವಹಣೆಯ ರಾಷ್ಟ್ರೀಯ ತಜ್ಞರ ತಂಡವು ಶಿಫಾರಸು ಮಾಡಿದೆ.

ಕೋವಿಡ್ ಅಲ್ಲದೆ ಇತರೆ ಗಂಭೀರ ಕಾಯಿಲೆಗಳಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ಐಸಿಯುನಲ್ಲಿ ಇದ್ದರೆ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವುದು 4ರಿಂದ 8 ವಾರಗಳ ವರೆಗೂ ಮುಂದೂಡುವುದು ಸೂಕ್ತ ಎಂದು ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

ಕೋವಿಡ್‌ ಲಸಿಕೆ ಹಾಕಿಸಿಕೊಂಡಿರುವ ವ್ಯಕ್ತಿ ಅಥವಾ ಕೋವಿಡ್‌ನಿಂದ ಗುಣಮುಖರಾಗಿ ಆರ್‌ಟಿ–ಪಿಸಿಆರ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿರುವವರು 14 ದಿನಗಳ ನಂತರ ರಕ್ತದಾನ ಮಾಡಬಹುದಾಗಿದೆ. ಬಾಣಂತಿಯರು ಲಸಿಕೆ ಹಾಕಿಸಿಕೊಳ್ಳುವಂತೆ ಶಿಫಾರಸು ಮಾಡಲಾಗಿದೆ.

ಕೋವಿಶೀಲ್ಡ್‌ ಲಸಿಕೆಯ ಡೋಸ್‌ಗಳ ನಡುವೆ ಅಂತರವನ್ನು 12ರಿಂದ 16 ವಾರಗಳಿಗೆ ಈಗಾಗಲೇ ಹೆಚ್ಚಿಸಲಾಗಿದೆ. ಪ್ರಸ್ತುತ ನಿಯಮಗಳ ಪ್ರಕಾರ, ಕೋವಿಡ್‌ನಿಂದ ಗುಣಮುಖರಾದವರು ನಾಲ್ಕು ವಾರಗಳ ನಂತರ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಗರ್ಭಿಣಿಯರಿಗೆ ಕೋವಿಡ್ ಲಸಿಕೆ ವಿತರಿಸುವ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಪ್ರಕಟಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT