ಬುಧವಾರ, ಮಾರ್ಚ್ 29, 2023
30 °C

ಕೋವಿನ್‌ ಜಾಗತಿಕ ಸಮಾವೇಶ: ಜುಲೈ 5ಕ್ಕೆ ಪಿಎಂ ಮೋದಿ ಭಾಷಣ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

PTI Photo

ನವದೆಹಲಿ: ಕೋವಿಡ್‌ 19ರ ವಿರುದ್ಧ ರಾಷ್ಟ್ರದಾದ್ಯಂತ ಲಸಿಕೆ ನೀಡಲು ಆರಂಭಿಸಲಾದ ಕೋವಿನ್‌ ಕಾರ್ಯಕ್ರಮವನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 5ರಂದು ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ರಾಷ್ಟ್ರೀಯ ಆರೋಗ್ಯ ಸಮಿತಿಯ ಸಹಯೋಗದಲ್ಲಿ ಜು.5ರಂದು ಸಂಜೆ 3 ಗಂಟೆಗೆ ಕೋವಿನ್‌ ಜಾಗತಿಕ ಸಮಾವೇಶ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪಿಎಂ ಮೋದಿ ವಿಶೇಷವಾದ ಸಂದೇಶವನ್ನು ಹಂಚಿಕೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಸಮಿತಿ (ಎನ್‌ಎಚ್‌ಎ) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು