ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲಾಬ್ ಚಂಡಮಾರುತ ನೆಲಸ್ಪರ್ಶ: ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ

1 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ: ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ
Last Updated 26 ಸೆಪ್ಟೆಂಬರ್ 2021, 16:23 IST
ಅಕ್ಷರ ಗಾತ್ರ

ಕೋಲ್ಕತ್ತ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಗುಲಾಬ್ ಚಂಡಮಾರುತವು ಭಾನುವಾರ ರಾತ್ರಿ ಒಡಿಶಾ-ಆಂಧ್ರಪ್ರದೇಶ ಗಡಿಭಾಗದಲ್ಲಿ ನೆಲಸ್ಪರ್ಶಮಾಡಿದೆ. ಒಡಿಶಾದ ಗೋಪಾಲಪುರಂಮತ್ತು ಆಂಧ್ರಪ್ರದೇಶದ ಕಳಿಂಗಪಟ್ಟಣಂನಲ್ಲಿ ಚಂಡಮಾರುತವು ಭೂ ಪ್ರವೇಶ ಮಾಡಿದೆ.

ಚಂಡಮಾರುತದ ನೆಲಸ್ಪರ್ಶದ ನಂತರ ಎರಡೂ ರಾಜ್ಯಗಳಲ್ಲಿ ಭಾರಿ ಮಳೆಯಾಗಿದೆ.ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರವಾಹದ ಸ್ಥಿತಿ ಎದುರಿಸುವ ಅಪಾಯವಿದ್ದ ಪ್ರದೇಶಗಳಿಂದಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ನೆಲಸ್ಪರ್ಶದ ವೇಳೆ ಗಾಳಿಯ ವೇಗವು 95 ಕಿ.ಮೀ.ನಷ್ಟಿತ್ತು. ಮೂರೂ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಪ್ರಭಾವವು ಕಡಿಮೆ ಇರಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ 20,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆಂಧ್ರಪ್ರದೇಶದ 9 ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವವವು ತೀವ್ರವಾಗಿರಲಿದ್ದು, 85,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೂರ್ವ ಕರಾವಳಿ ರೈಲ್ವೆಯು 34ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.

ನೌಕಾಪಡೆ ಸನ್ನದ್ಧ:ಚಂಡಮಾರುತದ ತುರ್ತು ಪರಿಸ್ಥಿತಿಯನ್ನು ಎದುರಿಸಲು ನೌಕಾಪಡೆಯ ಎರಡು ವಿಮಾನವಾಹಕ ನೌಕೆಗಳನ್ನು ಸಿದ್ಧವಾಗಿ ಇರಿಸಲಿದೆ. ಚೆನ್ನೈಗೆ ಸಮೀಪದಲ್ಲಿ ಐಎನ್‌ಎಸ್‌ ದೇಗಾ ಮತ್ತು ಐಎನ್‌ಎಸ್‌ ರಾಜಾಲಿ ನೌಕೆಗಳನ್ನು ಸಜ್ಜಾಗಿ ಇರಿಸಲಾಗಿದೆ.

ತುರ್ತು ಸಂದರ್ಭವನ್ನು ಎದುರಿಸಲು ಮತ್ತು ಜನರನ್ನು ತೆರವು ಮಾಡಲು ಅನುಕೂಲವಾಗುವಂತೆ ಹೆಲಿಕಾಪ್ಟರ್‌ಗಳನ್ನು ಸಜ್ಜಾಗಿ ಇರಿಸಲಾಗಿದೆ. ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನೌಕಾಪಡೆ ತಿಳಿಸಿದೆ.

ಇಬ್ಬರು ಮೀನುಗಾರರ ಸಾವು

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಚಂಡಮಾರುತ್ತಕೆಕ ಸಿಲುಕಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಒಬ್ಬರು ಕಣ್ಮರೆಯಾಗಿದ್ದಾರೆ.

ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿದ್ದ 6 ಮೀನುಗಾರರು ಭಾನುವಾರ ಸಂಜೆ ಕಣ್ಮರೆಯಾಗಿದ್ದರು.ಅವರ ದೋಣಿಯು ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಮೀನುಗಾರರ ಹುಡಕಾಟಕ್ಕೆ ನೌಕಾಪಡೆಯು ಕಾರ್ಯಾಚರಣೆ ನಡೆಸಿತು. ಈ ವೇಳೆ ಮೂವರು ಮೀನುಗಾರರು ಜೀವಂತವಾಗಿ ಪತ್ತೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಒಬ್ಬರು ಕಣ್ಮರೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT