ಕಣ್ಣೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿನಿಧಿಸುವ ಧರ್ಮದೋಮ್ ಕ್ಷೇತ್ರದ ಮೇಲೂರು ಗ್ರಾಮದಲ್ಲಿ ಸಿಪಿಐ (ಎಂ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಸೋಮವಾರ ತಡರಾತ್ರಿ ಗಲಾಟೆ ನಡೆದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತ ಧನರಾಜ್ ಅವರ ಕೈ ಮತ್ತು ಎದೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿದ್ದು, ಕೋಯಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಸಿಪಿಐ (ಎಂ) ಕಾರ್ಯಕರ್ತ ಮನೀಶ್ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.