ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಸೂಪರ್ ನ್ಯೂಮರಿ ಸೀಟು ಕಲ್ಪಿಸಿ: ಯುಜಿಸಿ

ನವದೆಹಲಿ: ಕೋವಿಡ್–19ರ ಕಾರಣದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ವಿದ್ಯಾರ್ಥಿಗಳಿಗೆ ಎಲ್ಲ ವಿಶ್ವವಿದ್ಯಾಲಯಗಳು ಸೂಪರ್‌ನ್ಯೂಮರಿ ಸೀಟುಗಳನ್ನು ಸೃಷ್ಟಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸೂಚಿಸಿದೆ.
ಈ ಕುರಿತು ದೇಶದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಪತ್ರ ಬರೆದಿರುವ ಯುಜಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳನ್ನು ಗುರುತಿಸುತ್ತದೆ. ಅವರ ಉನ್ನತ ಶಿಕ್ಷಣಕ್ಕೆ ವಿ.ವಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.