ಮಿರ್ಜಾಪುರ: ʼಉತ್ತರ ಪ್ರದೇಶ ಅಭಿವೃದ್ಧಿಯ ಶ್ರೇಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಬೇಕು. ಸ್ವಾತಂತ್ರ್ಯದ ನಂತರವೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಬೇಕಿತ್ತು. ಆದರೆ, ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳಿಗೆ ಅದಕ್ಕೆ ಸಮಯವಿರಲಿಲ್ಲ.ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಯಾವಾಗಲೂ ಶ್ರಮಿಸುತ್ತದೆʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಿರ್ಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯೋಗಿ ಮಾತನಾಡಿದರು.ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಶಾ ಅವರೂ ಇಲ್ಲಿಗೆ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಿರ್ಜಾಪುರ ಸಂಸದೆ ಹಾಗೂ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್, ಜಮ್ಮ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ʼಸಂವಿಧಾನದ 370ನೇ ವಿಧಿ ರದ್ದು ಮಾಡಲು ಅಮಿತ್ ಶಾ ಕಾರಣ. ಅದರಿಂದ ಇತಿಹಾಸ ನಿರ್ಮಾಣವಾಗಿದೆಯಷ್ಟೇಅಲ್ಲದೆ, ದೇಶದ ಭೌಗೋಳಿಕತೆಯನ್ನೂ ಬದಲಿಸಿದೆ. ಶಾ ಅವರನ್ನುರಾಜ್ಯಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆʼ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಸಂಬಂಧ ಮುಖ್ಯಮಂತ್ರಿ ಯೋಗಿ ಅವರನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯು2022ರಲ್ಲಿ ನಡೆಯಲಿದೆ. 403 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 309, ಸಮಾಜವಾದಿ ಪಕ್ಷ 49, ಬಿಎಸ್‌ಪಿ 18 ಹಾಗೂ ಕಾಂಗ್ರೆಸ್7 ಸ್ಥಾನಗಳನ್ನು ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.