ಮುಜಾಫರ್‌ನಗರ: ದಲಿತ ಬಾಲಕಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ

ಮುಜಾಫರ್‌ನಗರ (ಉತ್ತರ ಪ್ರದೇಶ): ಜಿಲ್ಲೆಯ ಪುರ್ಕಾಝಿ ಪಟ್ಟಣದಲ್ಲಿರುವ ಕಂಪ್ಯೂಟರ್ ಕೇಂದ್ರವೊಂದರಲ್ಲಿ ಸೋಮವಾರ 16 ವರ್ಷದ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕರ ವಿರುದ್ಧ ಸೂಕ್ತ ಐಪಿಸಿ ಸೆಕ್ಷನ್‌ಗಳು, ಪೊಕ್ಸೊ ಕಾಯ್ದೆ ಮತ್ತು ಎಸ್ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
50 ವರ್ಷದ ಮಹಿಳೆ ಮೇಲೆ ಅತ್ಯಾಚಾರ: ತನ್ನ ಮನೆಗೆ ಹಿಂದಿರುಗುತ್ತಿದ್ದ 50 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಮುಜಾಫರ್‌ನಗರ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ್ವೇಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ‘ತನ್ನ ಮೇಲೆ ಅತ್ಯಾಚಾರ ಮಾಡಿ, ಬೆದರಿಕೆಯೊಡ್ಡಿದ್ದ‘ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಅತ್ಯಾಚಾರ ಎಸಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಜನರು ಹಿಡಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.