ಗುರುವಾರ , ಡಿಸೆಂಬರ್ 1, 2022
27 °C

ಮುಂಬೈ: ನೇಣಿಗೆ ಶರಣಾದ ರೂಪದರ್ಶಿ, ಡೆತ್‌ನೋಟ್‌ನಲ್ಲೇನಿದೆ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ: ಮುಂಬೈನ ಅಂಧೇರಿ ಪ್ರದೇಶದ ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ರೂಪದರ್ಶಿಯೊಬ್ಬರ ಶವ ಪತ್ತೆಯಾಗಿದೆ.

ಮೃತ ಮಹಿಳೆ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಟೇಲ್‌ನಲ್ಲಿ ರಾತ್ರಿ ಊಟಕ್ಕೆ ಆರ್ಡರ್ ಮಾಡಿದ್ದರು.

ಗುರುವಾರ ಬೆಳಿಗ್ಗೆ ಸ್ವಚ್ಛತಾ ಸಿಬ್ಬಂದಿ ಪದೇ ಪದೇ ಕರೆ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೊಟೇಲ್‌ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ರೂಪದರ್ಶಿ ಶವ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

‘ನನ್ನನ್ನು ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಸಂತೋಷವಾಗಿಲ್ಲ. ನನಗೆ ಶಾಂತಿ ಬೇಕು’ ಎಂದು ಡೆತ್‌ನೋಟ್‌ನಲ್ಲಿ ರೂಪದರ್ಶಿ ಬರೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ... ಗಾಂಧಿ ಕುಟುಂಬ ಅವಧಿ ಮೀರಿದ ಡ್ರಗ್ಸ್‌ ಇದ್ದಂತೆ: ಅಸ್ಸಾಂ ಸಿಎಂ ಹಿಮಂತ ಶರ್ಮಾ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು