ಹಿಂಡನ್‌ಬರ್ಗ್ ವರದಿ: ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನೋಹರ್ ಲಾಲ್ ಮನವಿ

ನವದೆಹಲಿ: ಅದಾನಿ ಸಮೂಹ ಕಂಪನಿಗಳ ವಿರುದ್ಧ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ಮಾಡಿರುವ ‘ಕ್ರಿಮಿನಲ್ ಪಿತೂರಿ’ ಬಗ್ಗೆ ತನಿಖೆ ನಡೆಸಲು ಕೇಂದ್ರ ಮತ್ತು ಸೆಬಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹಿಂಡನ್ ಬರ್ಗ್ ರಿಸರ್ಚ್‌ನ ಅಮೆರಿಕ ನಿವಾಸಿ ನೇಟ್ ಅಂಡರ್ಸನ್ ಮತ್ತು ಅವರ ಭಾರತೀಯ ಕಂಪನಿಗಳು ಕ್ರಿಮಿನಲ್ ಪಿತೂರಿ ನಡೆಸಿವೆ. ಅದಾನಿ ಸಮೂಹವು ಷೇರು ಮಾರುಕಟ್ಟೆಯಲ್ಲಿ ಹಾಗೂ ಉದ್ಯಮದಲ್ಲಿ ಅವ್ಯವಹಾರ ನಡೆಸಿದೆ ಎಂಬುದಾಗಿ ‘ಹಿಂಡನ್‌ಬರ್ಗ್ ರಿಸರ್ಚ್’ ಸಂಸ್ಥೆ ಜ.25ರಂದು ಬಿಡುಗಡೆ ಮಾಡಿದ ತನ್ನ ವರದಿಯಲ್ಲಿ ಆರೋಪಿಸಿದೆ. ಆದರೆ, ಇದು ಕಪೋಲಕಲ್ಪಿತ ವರದಿ ಎಂದು ಅರ್ಜಿದಾರರು ಹೇಳಿದ್ದಾರೆ.
‘ಸೆಬಿ, ಅದಾನಿ ಸಮೂಹ ಷೇರುಗಳ ವಹಿವಾಟು ಸ್ಥಗಿತಗೊಳಿಸದೆ ಮುಗ್ಧ ಹೂಡಿಕೆದಾರರ ಶೋಷಣೆಗೆ ಅವಕಾಶ ನೀಡಿತು’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.