ಗುರುವಾರ , ನವೆಂಬರ್ 26, 2020
22 °C

ಕಾಸರಗೋಡು: ಅನಂತಪುರ ದೇಗುಲ ಪ್ರವೇಶಿಸಿದ ಮೊಸಳೆ ‘ಬಬಿಯಾ’, ಅರ್ಚಕರಿಗೆ ಅಚ್ಚರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Babiya, Ananthapura Lake temple crocodile, made a rare appearance at Sri Ananthapadmanabha Swamy Lake Temple in Kumble. Credit: Sri Ananthapadmanabha Swamy Lake Temple official

ಕಾಸರಗೋಡು: ಇಲ್ಲಿನ ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭ ಸ್ವಾಮಿ ದೇಗುಲದ ಕೆರೆಯಲ್ಲಿನ ಮೊಸಳೆ ‘ಬಬಿಯಾ’ ಮಂಗಳವಾರ ರಾತ್ರಿ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ, ಕೆರೆಯಿಂದ ಹೊರಬಂದ ಬಬಿಯಾ ದೇಗುಲದ ಆವರಣ ಪ್ರವೇಶಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಮೊಸಳೆಯು ದೇಗುಲದ ಆವರಣ ಪ್ರವೇಶಿಸಿರುವುದು ಇದೇ ಮೊದಲು ಎಂದೂ ದೇಗುಲದ ಮೂಲಗಳು ತಿಳಿಸಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು