ಮಂಗಳವಾರ, ಜನವರಿ 26, 2021
16 °C

ಕೋವಿಡ್‌: ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ಶಶಿ ತರೂರ್ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಪ್ರಸರಣವನ್ನು ನಿಯಂತ್ರಿಸಲು ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್‌ ನಾಯಕ ಶಶಿ ತರೂರ್ ಸಲಹೆ ನೀಡಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ ಬ್ರಿಟನ್‌ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ ತೀವ್ರವಾಗಿ ಹರಡುತ್ತಿರುವ ಕಾರಣ ಬೋರಿಸ್‌ ಅವರು ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಶಶಿ ತರೂರ್‌ ಅವರು,‘ ಕೋವಿಡ್‌ನ ಎರಡನೇ ಅಲೆಯಿಂದಾಗಿ ಬ್ರಿಟನ್‌ ಪ್ರಧಾನಿ ಅವರು ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಇದರಿಂದಾಗಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳೇ ಇಲ್ಲ. ಹೀಗಿರುವಾಗ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ರದ್ದುಗೊಳಿಸಬಾರದೇ’ ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: 

‘ಎಂದಿನಂತೆ ಪರೇಡ್‌ ಅನ್ನು ಹುರಿದುಂಬಿಸಲು ಜನ ಸಮೂಹವನ್ನು ಸೇರಿಸುವುದು ಬೇಜವಾಬ್ದಾರಿಯಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು