ಗುರುವಾರ , ಮೇ 26, 2022
23 °C

ಜಮ್ಮು ಮತ್ತು ಕಾಶ್ಮೀರ: ಸಿಆರ್‌ಪಿಎಫ್‌ ಯೋಧನ ಮೃತದೇಹ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬನಿಹಾಳ್‌/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸಿಆರ್‌ಪಿಎಫ್‌ ಯೋಧ ರಾಜೀವ್ ರಂಜನ್‌ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗುಂಡೇಟಿನ ಗಾಯಗಳಿವೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯ ಬೂಮ್ ಚಂದೇರ್‌ಕೂಟ್ ಪ್ರದೇಶದ 84ನೇ ಬೆಟಾಲಿಯನ್ ಕ್ಯಾಂಪ್‌ ಬಳಿ ಮೃತದೇಹ ಪತ್ತೆಯಾಗಿದೆ.

ಬಿಹಾರದ ಛಾಪ್ರಾ ಜಿಲ್ಲೆಯ ಮೂಲದ ರಂಜನ್, ತನ್ನ ಸರ್ವೀಸ್‌ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಸಿಆರ್‌ಪಿಸಿ 174 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು