ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಪಿಯಾನ್‌: ಉಗ್ರರ ದಾಳಿಗೆ ಸಿಆರ್‌ಪಿಎಫ್‌ ಯೋಧ ಹುತಾತ್ಮ

Last Updated 12 ಮಾರ್ಚ್ 2022, 15:54 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಚೋಟಿಪೋರಾ ಪ್ರದೇಶದಲ್ಲಿ ಶನಿವಾರ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಯೋಧ ಹುತಾತ್ಮರಾಗಿದ್ದಾರೆ.

ಮುಖ್ತಾರ್‌ ಅಹ್ಮದ್‌ ಹುತಾತ್ಮರಾದವರು. ‘ಚೋಟಿಪೋರಾ ನಿವಾಸಿಯಾದ ಯೋಧ ಮುಖ್ತಾರ್‌ ಅಹ್ಮದ್‌ ರಜೆಯ ಮೇಲೆ ಮನೆಗೆ ಬಂದಿದ್ದರು. ಶನಿವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲವು ದಿನಗಳ ನಂತರ ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ ಹೆಚ್ಚಾಗಿದ್ದು, ಶೋಪಿಯಾನ್‌ನ ನೆರೆಯ ಜಿಲ್ಲೆ ಕುಲ್ಗಾಂನಲ್ಲಿ ಕಳೆದ ಮೂರು ದಿನಗಳಲ್ಲಿ ಇಬ್ಬರು ಸರಪಂಚರನ್ನು (ಗ್ರಾಮ ಪಂಚಾಯಿತಿ ಸದಸ್ಯರು) ಹತ್ಯೆ ಮಾಡಲಾಗಿದೆ. ಮಾರ್ಚ್‌ ತಿಂಗಳಲ್ಲಿ ಆರು ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT