ಶ್ರೀನಗರದಲ್ಲಿ ಸಿಆರ್‌ಪಿಎಫ್ ವಾಹನ ಅಪಘಾತ; ಒಬ್ಬ ಸಿಬ್ಬಂದಿ ಸಾವು, 12 ಜನರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿಯೊಬ್ಬರು ಸಾವಿಗೀಡಾಗಿದ್ದಾರೆ.
ಹೈದರ್‌ಪೊರಾ ಬೈಪಾಸ್ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಿಆರ್‌ಪಿಎಫ್‌ನ ಒಟ್ಟು 13 ಸಿಬ್ಬಂದಿ ಗಾಯಗೊಂಡಿದ್ದರು.
ಗಾಯಗೊಂಡಿದ್ದ ಎಲ್ಲ ಸಿಬ್ಬಂದಿಯನ್ನೂ ಬಿಎಸ್‌ಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ಎಂ.ಎನ್.ಮಣಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ–ಪುಲ್ವಾಮದಲ್ಲಿ ಉಗ್ರ ದಾಳಿಗೆ ಆರ್ಪಿಎಫ್ ಸಿಬ್ಬಂದಿ ಹುತಾತ್ಮ
ಎಎಸ್‌ಐ ಜಸ್ರಾಜ್ ಮತ್ತು ಕಾನ್‌ಸ್ಟೆಬಲ್ ಸುಶಾಂತ್ ಬಿಸ್ವಾಸ್ ಅವರನ್ನು ಸೇನೆಯ 92 ಬೇಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.