ಗುರುವಾರ , ಸೆಪ್ಟೆಂಬರ್ 29, 2022
26 °C

ರಾಯಪುರ: 10ರಿಂದ ಆರ್‌ಎಸ್‌ಎಸ್‌ ಸಮನ್ವಯ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವಾರ್ಷಿಕ ಸಮನ್ವಯ ಸಭೆ ಸೆಪ್ಟೆಂಬರ್‌ 10ರಿಂದ 12ರವರೆಗೆ ಛತ್ತೀಸಗಡದ ರಾಯಪುರದಲ್ಲಿ ನಡೆಯಲಿದೆ.

ರಾಷ್ಟ್ರಮಟ್ಟದ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ 36 ಅಂಗ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮುಂಬೈನ ವಿಶ್ವ ಸಂವಾದ್‌ ಕೇಂದ್ರ ತಿಳಿಸಿದೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಸಭೆಯಲ್ಲಿ ಮಾರ್ಗದರ್ಶನ ನೀಡುವರು ಎಂದೂ ಹೇಳಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು