ಕೋಲ್ಕತ್ತ: ಪಶ್ಚಿಮ ಬಂಗಾಳದ ‘ಉತ್ತರ 24 ಪರಗಣ’ ಜಿಲ್ಲೆಯ ಕಮರ್‌ಹಾಟಿ ಗೋಲಘಾಟ್ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿರುವ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಭೀರ ಗಾಯಗೊಂಡಿರುವ ಇಬ್ಬರನ್ನು ಸಾಗರ್ ದತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.