ಬುಧವಾರ, ಡಿಸೆಂಬರ್ 8, 2021
25 °C

ಡ್ರಗ್ಸ್ ಪ್ರಕರಣ: ಆರ್ಯನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟ ಶಾರೂಕ್‌ ಖಾನ್ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ಗುರುವಾರ ತಿಳಿಸಿದೆ.

ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರು ಶುಕ್ರವಾರದ ತುರ್ತು ವಿಚಾರಣೆಗೆ ಕೋರಿ ನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ, ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ‘ಆರೋಪಿಯನ್ನು ವಿಚಾರಣೆ ನಡೆಸಲು ಮುಂದಿನವಾರದವರೆಗೆ ಸಮಯಾವಕಾಶ ಕೋರಿದರು. ಹೀಗಾಗಿ ನ್ಯಾಯಮೂರ್ತಿ ಸಾಂಬ್ರೆ ಅವರು ಅರ್ಜಿ ವಿಚಾರಣೆಯನ್ನು ಅ.26ಕ್ಕೆ ಮುಂದೂಡಿದರು.

ಅದೇ ದಿನ ಈ ಪಕ್ರಣದಲ್ಲಿ ಸಹ ಆರೋಪಿಯಾಗಿರುವ ಮುನ್ಮುನ್ ಧಮೇಚಾ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಲಿದೆ.

ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯವರು ಬುಧವಾರ ಸಂಜೆ ಆರ್ಯನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ, ಆರೋಪಿ ಪರ ವಕೀಲರು ಅಂದು ಸಂಜೆಯೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. 

ವಿಶೇಷ ನ್ಯಾಯಾಲಯ, ಆರೋಪಿ ಆರ್ಯನ್ ಖಾನ್, ‘ನಿಯಮಿತವಾಗಿ ಮಾದಕ ವಸ್ತುಗಳ ಸೇವನೆಯಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಮತ್ತು ಡ್ರಗ್ಸ್‌ ಪೆಡ್ಲರ್‌ಗಳು ಮತ್ತು ಪೂರೈಕೆದಾರರೊಂದಿಗೆ ನಂಟು ಹೊಂದಿದ್ದನ್ನು ಗಮನಿಸಿ, ಜಾಮೀನು ನಿರಾಕರಿಸಿತ್ತು.

ಪ್ರಕರಣದ ಆರೋಪಿಗಳಾದ ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು