ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.1ರಿಂದ 11ರವರೆಗೆ ಸಿಯುಇಟಿ–ಪಿಜಿ: ಯುಜಿಸಿ

Last Updated 2 ಆಗಸ್ಟ್ 2022, 11:17 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ) ಸೆಪ್ಟೆಂಬರ್‌ 1ರಿಂದ 11ರವರೆಗೆ ನಡೆಯಲಿದೆ ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ಮಂಗಳವಾರ ತಿಳಿಸಿದ್ದಾರೆ.

ಸಿಯುಇಟಿ–ಪಿಜಿ, ದೇಶದಾದ್ಯಂತ ವಿಶ್ವವಿದ್ಯಾಲಯಗಳಿಗೆ ಏಕಗವಾಕ್ಷಿಯ ಪ್ರವೇಶ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಿದೆ ಎಂದು ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

66 ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ಸಹಭಾಗಿತ್ವದ ವಿಶ್ವವಿದ್ಯಾಲಯಗಳಿಗೆ ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನುರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವಹಿಸಿದೆ. ಕಂಪ್ಯೂಟರ್‌ ಆಧರಿತ ಪರೀಕ್ಷೆ (ಸಿಬಿಟಿ) ದೇಶದ ಸುಮಾರು 500 ನಗರಗಳಲ್ಲಿ ಮತ್ತು ವಿದೇಶದ 13 ನಗರಗಳಲ್ಲಿ ನಡೆಯಲಿದ್ದು, 3.57 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ ಎಂದು ಕುಮಾರ್‌ ಸರಣಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT