ನವದೆಹಲಿ: ದೇಶದಲ್ಲಿ ಈವರೆಗೆ 109 ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಸಂಜೆ 7ಗಂಟೆಗೆ ಕೊನೆಗೊಂಡಂತೆ ದೇಶದಲ್ಲಿ 54 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ.

ದೇಶದಾದ್ಯಂತ ಜನವರಿ 16 ರಿಂದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ಮೂಲಕ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ 2ರ ಬಳಿಕ ಮುಂಚೂಣಿ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗಿತ್ತು.

ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್ 1ರ ಬಳಿಕ 45 ವರ್ಷ ಮೇಲಿನವರಿಗೆ ಲಸಿಕೆ ವಿತರಿಸಲಾಯಿತು.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರವು ಅಭಿಯಾನವನ್ನು ವಿಸ್ತರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.