ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ಟಮ್ಸ್‌ ಕಾಯ್ದೆ ಉಲ್ಲಂಘನೆ: ಕೇರಳ ಸಚಿವ ಕೆ.ಟಿ.ಜಲೀಲ್‌ಗೆ ಸಮನ್ಸ್‌

Last Updated 7 ನವೆಂಬರ್ 2020, 11:26 IST
ಅಕ್ಷರ ಗಾತ್ರ

ಕೊಚ್ಚಿ: ವೈಯಕ್ತಿಕ ಬಳಕೆಗಾಗಿ, ಯುಎಇ ಕಾನ್ಸುಲೇಟ್‌ ಅಧಿಕಾರಿಗಳು ರಾಜತಾಂತ್ರಿಕ ಮಾರ್ಗದ ಮುಖಾಂತರ ಕಳುಹಿಸಿದ್ದ ಕುರಾನ್‌ ಗ್ರಂಥವನ್ನು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಕಸ್ಟಮ್ಸ್‌ ವಿಭಾಗವು ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್‌ ಅವರಿಗೆ ಸಮನ್ಸ್‌ ನೀಡಿದೆ.

ಸೋಮವಾರ (ನ.9) ವಿಚಾರಣೆಗೆ ಹಾಜರಾಗಲು ಕಸ್ಟಮ್ಸ್‌ ನೋಟಿಸ್‌ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕುರಾನ್‌ ಗ್ರಂಥದ ಆಮದು ಸೇರಿದಂತೆ ತನಿಖೆಯ ಭಾಗವಾಗಿ ಇತರೆ ವಿಷಯಗಳ ಬಗ್ಗೆಯೂ ಸಚಿವರಿಂದ ಹಲವು ಸ್ಪಷ್ಟನೆಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಕೇಳಲಿದ್ದಾರೆ ಎಂದು ಮೂಲಗಳು ತಿಳಿಸಿದವು.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಈಗಾಗಲೇ ಜಲೀಲ್‌ ಅವರನ್ನು ವಿಚಾರಣೆಗೊಳಪಡಿಸಿದೆ. ಜೊತೆಗೆ, ರಾಜತಾಂತ್ರಿಕ ಮಾರ್ಗದ ದುರ್ಬಳಕೆಗೆ ಸಂಬಂಧಿಸಿದಂತೆ ವಿದೇಶ ದೇಣಿಗೆ ನಿಯಂತ್ರಣ ಕಾಯ್ದೆ(ಎಫ್‌ಸಿಆರ್‌ಎ)ಉಲ್ಲಂಘನೆ ಆರೋಪದಡಿ ಜಾರಿ ನಿರ್ದೇಶನಾಲಯವೂ(ಇ.ಡಿ)ಜಲೀಲ್‌ ಅವರನ್ನು ಇತ್ತೀಚೆಗೆ ವಿಚಾರಣಗೊಳಪಡಿಸಿತ್ತು. ವೈಯಕ್ತಿಕ ಬಳಕೆಗಾಗಿ, ತೆರಿಗೆಯಿಂದ ವಿನಾಯಿತಿ ಪಡೆಯಲು ರಾಜತಾಂತ್ರಿಕ ಮಾರ್ಗದ ಮುಖಾಂತರ ಸರ್ಕಾರಿ ಅಧಿಕಾರಿಗಳು ಕುರಾನ್‌ ಗ್ರಂಥ ಹಾಗೂ 18 ಸಾವಿರ ಕೆ.ಜಿ ಖರ್ಜೂರವನ್ನು ಆಮದು ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್‌ ಇಲಾಖೆಯು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT