ಚಿನ್ನ ಕಳ್ಳ ಸಾಗಣೆ ಪ್ರಕರಣ: ಕಸ್ಟಮ್ಸ್ ನಿಂದಲೂ ಶಿವಶಂಕರ್ ಬಂಧನ

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಬಂಧಿಸಿದರು.
ಈ ಹಿಂದೆ ಪ್ರಕರಣ ಸಂಬಂಧ ಶಿವಶಂಕರ್ ಅನ್ನು ಇ.ಡಿ ಬಂಧಿಸಿತ್ತು. ಮಂಗಳವಾರ ಬೆಳಿಗ್ಗೆ ಶಿವಶಂಕರ್ ಅವರನ್ನು ಇರಿಸಲಾಗಿರುವ ಜೈಲಿಗೆ ಕಸ್ಟಮ್ ಆಯುಕ್ತರು ಭೇಟಿ ನೀಡಿ, ಶಿವಶಂಕರ್ ಬಂಧನವನ್ನು ಔಪಚಾರಿಕವಾಗಿ ದಾಖಲಿಸಿದರು.
ಶಿವಶಂಕರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರನ್ನು ಬಂಧಿಸುವ ಕುರಿತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಕಸ್ಟಮ್ಸ್‌ಗೆ ಸೋಮವಾರ ಅನುಮತಿ ನೀಡಿತ್ತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.