ಗುರುವಾರ , ಸೆಪ್ಟೆಂಬರ್ 23, 2021
20 °C

ವಿಷಲ್‌ಬ್ಲೋಯಿಂಗ್: ಜಾಗೃತಿ ಮೂಡಿಸಲು ಸಿವಿಸಿ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿವಿಧ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ (ವಿಷಲ್‌ಬ್ಲೋಯಿಂಗ್) ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎಂದು ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಎಲ್ಲ ಇಲಾಖೆಗಳಿಗೆ ಸೂಚಿಸಿದೆ.

ಮುಂದಿನ ತಿಂಗಳ ಮೊದಲ ವಾರ ‘ಜಾಗೃತಿ ಸಪ್ತಾಹ‘ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಈ ಸೂಚನೆ ನೀಡಿದೆ.

ಗ್ರಾಹಕ ಕೇಂದ್ರಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಗ್ರಾಹಕರ ವ್ಯಾಜ್ಯಗಳನ್ನು ಪರಿಹರಿಸಲು ಶಿಬಿರಗಳನ್ನು ಆಯೋಜಿಸಬೇಕು ಎಂದು ಬುಧವಾರ ಹೊರಡಿಸಿರುವ ಆದೇಶದಲ್ಲಿ ಸಿವಿಸಿ ತಿಳಿಸಿದೆ.

ಭ್ರಷ್ಟಾಚಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ‘ಜಾಗೃತಿ ಗ್ರಾಮಸಭೆ’ಗಳನ್ನು ಸಂಘಟಿಸಬೇಕು ಎಂದೂ ಆಯೋಗ ಸೂಚಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು