ಶನಿವಾರ, ಫೆಬ್ರವರಿ 27, 2021
30 °C

ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಂತರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಕುರಿತು ಚರ್ಚಿಸುವ ಸಲುವಾಗಿ ಶುಕ್ರವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನಿಗದಿಯಾಗಿದೆ.

‘2022ರ ಡಿಸೆಂಬರ್‌ ವರೆಗೆ ಅಧ್ಯಕ್ಷರ ಅವಧಿಗೆ ಮಾತ್ರ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿಯು ಪ್ರಸ್ತಾವ ಮಾಡಲಿದೆ’ ಎಂದು ಕಾಂಗ್ರೆಸ್‌ನ ಮೂಲಗಳು ತಿಳಿಸಿವೆ.  

‘ಕಾಂಗ್ರೆಸ್ ಅಧ್ಯಕ್ಷರ ಅವಧಿಯು 2017ರ ಡಿಸೆಂಬರ್‌ನಿಂದ 2022ರ ಡಿಸೆಂಬರ್ ತನಕ ಇದೆ. 2022ರವರೆಗೆ ಅವಧಿಗೆ ಮಾತ್ರ ಚುನಾವಣೆ ನಡೆಯುವ ಪ್ರಸ್ತಾವವಿದೆಯೇ ಹೊರತು ಹೊಸದಾಗಿ ಐದು ವರ್ಷಗಳ ಅವಧಿಗೆ ಅಲ್ಲ’ ಎಂದೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು