ಸೋಮವಾರ, ಆಗಸ್ಟ್ 15, 2022
20 °C

'ಬುರೇವಿ'| ಕೇರಳ, ತಮಿಳುನಾಡಿಗೆ ಎಲ್ಲಾ ನೆರವು ನೀಡಲಿದೆ ಕೇಂದ್ರ: ಅಮಿತ್‌ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದಕ್ಷಿಣ ಕರಾವಳಿಯಲ್ಲಿ ‘ಬುರೇವಿ’ ಚಂಡಮಾರುತದಿಂದಾಗಿ ಭೂ ಕುಸಿತಗಳು ಸಂಭವಿಸುವ ಸಾಧ್ಯತೆಗಳಿದ್ದು,  ಕೇರಳ ಮತ್ತು ತಮಿಳುನಾಡಿನ ಜನರಿಗೆ ಸಾಧ್ಯವಾಗುವ ಎಲ್ಲಾ ನೆರವುಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಅಮಿತ್‌ ಶಾ ಅವರು ಗುರುವಾರ ಭರವಸೆ ನೀಡಿದರು.

ಈ ಬಗ್ಗೆ ಅಮಿತ್‌ ಶಾ ಅವರು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮತ್ತು ಪಿಣರಾಯಿ ವಿಜಯನ್‌ ಅವರಿಗೆ ಫೋನ್‌ ಕರೆ ಮೂಲಕ ತಿಳಿಸಿದರು.

‘ಬುರೇವಿ’ ಚಂಡಮಾರುತದ ಬಗ್ಗೆ ತಮಿಳುನಾಡು ಮತ್ತು ಕೇರಳ ಮುಖ್ಯ ಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಈ ಎರಡು ರಾಜ್ಯಗಳ ಜನರಿಗೆ ಎಲ್ಲಾ ರೀತಿಯ ನೆರವುಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಎನ್‌ಡಿಆರ್‌ಎಫ್‌ನ ಹಲವು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಮಿತ್‌ ಶಾ ಟ್ವೀಟ್ ಮಾಡಿದ್ದಾರೆ.

ಬುರೇವಿ ಚಂಡಮಾರುತವು ಶುಕ್ರವಾರ ದಕ್ಷಿಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕೇರಳ ಮತ್ತು ತಮಿಳುನಾಡಿನ ದಕ್ಷಿಣ ಭಾಗಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು