ಬುಧವಾರ, ಜೂನ್ 16, 2021
23 °C
ಕರಾವಳಿ ಪ್ರದೇಶದ 12,420 ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ

ತೌತೆ ಚಂಡಮಾರುತ: ಸಿದ್ಧತಾ ಕಾರ್ಯ ಪರಿಶೀಲಿಸಿದ ಮಹಾರಾಷ್ಟ್ರ ಸಿ.ಎಂ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ತೌತೆ’ ಚಂಡಮಾರುತದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಸೋಮವಾರ ಮುಂಬೈ, ಠಾಣೆ ಮತ್ತು ಇತರೆ ಕರಾವಳಿ ಜಿಲ್ಲೆಗಳಲ್ಲಿ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದರು.

‘ರತ್ನಗಿರಿ, ಸಿಂಧುದುರ್ಗ ಮತ್ತು ರಾಯಗಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ 12,420 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.

‘ಚಂಡಮಾರುತದಿಂದಾಗಿ ಕೋವಿಡ್‌ ರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಿ’ ಎಂದು ಮುಂಬೈ, ಠಾಣೆ ಸೇರಿದಂತೆ ಇತರೆ ಜಿಲ್ಲೆಗಳ ಅಧಿಕಾರಿಗಳಿಗೆ ಉದ್ಧವ್‌ ಠಾಕ್ರೆ ಅವರು ಸೂಚಿಸಿದ್ದಾರೆ.

ರಾಯಗಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಮತ್ತು ಮುಂಬೈ, ಠಾಣೆ, ಪಾಲ್ಘಾರ್‌ನಲ್ಲಿ ಆರೆಂಜ್‌ ಅಲರ್ಟ್‌ ಅನ್ನು ಘೋಷಿಸಲಾಗಿದೆ.

ಇನ್ನೊಂದೆಡೆ ರಾಜ್ಯ ಸಚಿವಾಲಯದ ವಿಪತ್ತು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಅಜಿತ್‌ ಪವಾರ್ ಅವರು ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ಜತೆಗೆ ಎಲ್ಲಾ ಕರಾವಳಿ ಜಿಲ್ಲೆಗಳ ಆಡಳಿತ ಅಧಿಕಾರಿಗಳಿಗೆ ಜಾಗರೂಕರಾಗಿರುವಂತೆ ಸೂಚಿಸಿದರು.

ರತ್ನಗಿರಿ, ಸಿಂಧುದುರ್ಗ್ ಮತ್ತು ರಾಯಗಡ, ಠಾಣೆ, ಪಾಲ್ಘಾರ್‌ , ಮುಂಬೈ ನಗರ ಮತ್ತು ಉಪನಗರದ ಜಿಲ್ಲಾಧಿಕಾರಿಗಳು ಹಾಗೂ ಬೃಹತ್‌ ಮುಂಬೈ ನಗರ ಪಾಲಿಕೆಯ ಆಯುಕ್ತ ಇಕ್ಬಾಲ್‌ ಸಿಂಗ್‌  ಅವರೊಂದಿಗೆ ದೂರವಾಣಿ ಕರೆಯ ಮೂಲಕ ಪರಿಹಾರ ಕಾರ್ಯ ಮತ್ತು ಸಿದ್ಧತೆ ಬಗ್ಗೆ ಅಜಿತ್‌ ಪವಾರ್‌ ಮಾಹಿತಿ ‍ಪಡೆದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು