ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cyclone Mandous: ತಮಿಳುನಾಡಿನ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಶಾಲೆಗಳಿಗೆ ರಜೆ

Last Updated 9 ಡಿಸೆಂಬರ್ 2022, 5:29 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ತಮಿಳುನಾಡಿನ ವಿವಿಧೆಡೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ಚೆಂಗಲ್‌ಪಟ್ಟು, ವಿಲ್ಲುಪುರಂ ಮತ್ತು ಕಂಚೀಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಡ್ ಘೋಷಿಸಲಾಗಿದೆ.

ಭಾರಿ ಮಳೆ ಸುರಿಯುವ ಹಾಗೂ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕಾರೈಕಲ್‌ನಿಂದ ಪೂರ್ವ ಆಗ್ನೇಯಕ್ಕೆ 270 ಕಿ.ಮೀ. ದೂರದಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ. ಈ ವೇಳೆ ಗಂಟೆಗೆ 65ರಿಂದ 76 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT