‘ನಿವಾರ್’ ಚಂಡಮಾರುತ: 24 ಸಾವಿರ ಜನ ಸ್ಥಳಾಂತರ, 987 ನಿರಾಶ್ರಿತರ ಶಿಬಿರಗಳು

ಚೆನ್ನೈ: ‘ನಿವಾರ್’ ಚಂಡಮಾರುತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಒಟ್ಟು 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು 987 ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು ಬುಧವಾರದ ಸಂಜೆ ಅಥವಾ ಗುರುವಾರ ಬೆಳಗ್ಗೆ ನಿವಾರ್ ಚಂಡಮಾರುತ ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Tamil Nadu: Water logging in some parts of the city of Chennai, due to heavy rainfall ahead of #CycloneNivar's landfall pic.twitter.com/BuB6WSFoF5
— ANI (@ANI) November 25, 2020
ಮಂಗಳವಾರ ರಾತ್ರಿಯೇ ತಮಿಳುನಾಡು ಮತ್ತು ಪುದುಚೇರಿಯ ಹಲವೆಡೆ ಮಳೆಯಾಗಿದ್ದು, ಬುಧವಾರವು ಮಳೆ ಮುಂದುವರೆದಿದ್ದು ಚೆನ್ನೈ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಲವು ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಈಗಾಗಲೇ ಜಲಾವೃತವಾಗಿವೆ.
ಕಡ್ಲೂರು, ಚಿದಂಬರಂ, ಚೆನ್ನೈ ಸೇರಿದಂತೆ ಕರಾವಳಿ ಸಮೀಪದ 10 ಹೆಚ್ಚು ಜಿಲ್ಲೆಗಳಲ್ಲಿ ಚಂಡಮಾರುತ ತೀವ್ರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರದ ವಿಪತ್ತು ನಿರ್ವಹಣಾ ಪಡೆ, ಅರೆಸೇನಾ ಪಡೆಗಳು ಸೇರಿದಂತೆ ವಿವಿಧ ಸಂಸ್ಥೆಗಳು ಸಜ್ಜಾಗಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.
Army ready to assist govt & civil administration in Tamil Nadu & Puducherry to face #CycloneNivar, maintaining communication with officials. Twelve humanitarian assistance & disaster relief teams & two engineer task forces ready for deployment: Southern Command, Indian Army pic.twitter.com/CPiHojBap4
— ANI (@ANI) November 25, 2020
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.