ಬುಧವಾರ, ಆಗಸ್ಟ್ 10, 2022
24 °C

ದುರ್ಬಲಗೊಂಡ ತೌತೆ: ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ತೌತೆ ಚಂಡಮಾರುತ ದುರ್ಬಲಗೊಂಡಿದ್ದು, ರಾಜಸ್ಥಾನದ ದಕ್ಷಿಣ ಭಾಗ ಹಾಗೂ ಅದಕ್ಕೆ ಹೊಂದಿಕೊಂಡಂತೆ ಗುಜರಾತ್‌ನ ಪ್ರದೇಶಗಳನ್ನು ಕೇಂದ್ರೀಕೃತವಾಗಿರಿಸಿ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಹೇಳಿದೆ.

ಚಂಡಮಾರುತದ ಪರಿಣಾಮವಾಗಿ ಗುಜರಾತ್‌ನಲ್ಲಿ ಭಾರಿ ಮಳೆಯಾಗಿದೆ. ಉತ್ತರಾಖಂಡ, ಹಿಮಾಚಲಪ್ರದೇಶ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜಸ್ಥಾನದ ಪೂರ್ವಭಾಗದಲ್ಲಿ ಸಾಧಾರಣ ಹಾಗೂ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜಸ್ಥಾನದ ಉದಯಪುರದ ಪಶ್ಚಿಮ ಹಾಗೂ ನೈರುತ್ಯಕ್ಕೆ 60 ಕಿ.ಮೀ. ದೂರದಲ್ಲಿ, ಗುಜರಾತ್‌ನ ದೀಸಾದಿಂದ 110 ಕಿ.ಮೀ. ದೂರದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚು ಕಂಡು ಬಂದಿದೆ ಎಂದೂ ಇಲಾಖೆ ತಿಳಿಸಿದೆ.

ಗುಜರಾತ್‌ಗೆ ಹೊಂದಿಕೊಂಡಂತೆ ರಾಜಸ್ಥಾನದ ಪೂರ್ವಭಾಗದಲ್ಲಿ ಮುಂದಿನ 12 ಗಂಟೆಗಳಲ್ಲಿ ಗಾಳಿಯು ಪ್ರತಿಗಂಟೆಗೆ 65 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು