ಭಾನುವಾರ, ಆಗಸ್ಟ್ 1, 2021
27 °C

Covid-19 India Update: 71 ದಿನಗಳಲ್ಲಿ ಕಡಿಮೆ ಪ್ರಕರಣ, ಚೇತರಿಕೆ ಪ್ರಮಾಣ ಶೇ.95

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೇಶದಲ್ಲಿ ಹೊಸದಾಗಿ 80,834 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದು 71 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಪ್ರಕರಣಗಳಾಗಿವೆ. ಇದರೊಂದಿಗೆ ಸೋಂಕು ದೃಢ ಪ್ರಮಾಣವು ಶೇಕಡ 4.25ಕ್ಕೆ ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. 

‘ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 2,94,39,989ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 3,303 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 3,70,384ಕ್ಕೆ ಏರಿದೆ’ ಎಂದು ಸಚಿವಾಲಯವು ಪ್ರಕಟಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,26,159ಕ್ಕೆ ಇಳಿಕೆಯಾಗಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 3.49ರಷ್ಟು ಪಾಲನ್ನು ಹೊಂದಿದೆ. ಜತೆಗೆ ಕೋವಿಡ್‌ ಚೇತರಿಕೆ ಪ್ರಮಾಣವು ಶೇಕಡ 95.26ಕ್ಕೆ ಹೆಚ್ಚಿದೆ.

ದೇಶದಲ್ಲಿ ಇದುವರೆಗೆ 37,62,32,162 ಪರೀಕ್ಷೆಗಳನ್ನು ನಡೆಸಲಾಗಿದ್ದು, ಶನಿವಾರ 19,20,477 ಮಂದಿಗೆ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು