ಶುಕ್ರವಾರ, ಮೇ 20, 2022
27 °C

India Covid-19 Update: ಕೋವಿಡ್ ಮತ್ತೆ ಹೆಚ್ಚಳ, 2,82,970 ಪ್ರಕರಣ ದೃಢ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 2,82,970 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. 441 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸೋಮವಾರ ಹಾಗೂ ಮಂಗಳವಾರ ದೈನಂದಿನ ಪ್ರಕರಣಗಳಲ್ಲಿ ತುಸು ಇಳಿಕೆ ಕಂಡುಬಂದಿದ್ದರೆ, ಬುಧವಾರ ಮತ್ತೆ ಹೆಚ್ಚಳವಾಗಿದೆ.

ಸದ್ಯ ದೇಶದಲ್ಲಿ 18,31,000 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 15.13ಕ್ಕೆ ಏರಿಕೆಯಾಗಿದೆ.

ಈವರೆಗೆ 8,961 ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ. ಮಂಗಳವಾರಕ್ಕೆ ಹೋಲಿಸಿದರೆ ಓಮೈಕ್ರಾನ್ ದೃಢಪಟ್ಟ ಪ್ರಕರಣಗಳ ಪ್ರಮಾಣದಲ್ಲಿ ಶೇ 0.79ರ ಹೆಚ್ಚಳ ಕಂಡುಬಂದಿದೆ.

ಈ ಮಧ್ಯೆ, ಕೊರೊನಾ ವೈರಸ್‌ ಅನ್ನು ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಅಂತಹ ವೈರಸ್‌ಗೆ ಕೊನೆಯೆಂಬುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು