ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಸಕ್ರಿಯ ಪ್ರಕರಣ 1.63 ಲಕ್ಷಕ್ಕೆ ಇಳಿಕೆ

Last Updated 26 ಅಕ್ಟೋಬರ್ 2021, 9:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,428 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 238 ದಿನಗಳಲ್ಲೇ ಇದು ಕನಿಷ್ಠ ಪ್ರಮಾಣವಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,63,816ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕಿತರ ಸಂಖ್ಯೆ3,42,02,202 ಹೆಚ್ಚಳವಾಗಿದೆ. 356 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 4,55,068ಕ್ಕೆ ಏರಿಕೆಯಾಗಿದೆ. ಮೃತಪಟ್ಟವರಲ್ಲಿ ಕೇರಳದಲ್ಲಿ 281 ಮಂದಿ ಸೇರಿದ್ದಾರೆ. ಉಳಿದಂತೆ ತಮಿಳುನಾಡಿನಲ್ಲಿ 14, ಮಹಾರಾಷ್ಟ್ರದಲ್ಲಿ 12, ಪಶ್ಚಿಮ ಬಂಗಾಳದಲ್ಲಿ 11 ಮಂದಿ ಇದ್ದಾರೆ.

ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.49ಕ್ಕೆ ಕುಸಿದದ್ದು, ಚೇತರಿಕೆ ಪ್ರಮಾಣ ಶೇ 98.18ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT