ಭಾನುವಾರ, ಏಪ್ರಿಲ್ 11, 2021
27 °C
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಉಲ್ಲೇಖ

ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ, ಕತ್ತು ಹಿಸುಕಿ ಕೊಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಆಲಿಘರ್‌: ‘ಉತ್ತರಪ್ರದೇಶದ ಆಲಿಘರ್‌ನ ಗ್ರಾಮವೊಂದರ ಬಳಿ ಭಾನುವಾರ ಪತ್ತೆಯಾಗಿದ್ದ ದಲಿತ ಬಾಲಕಿಯ ಶವ ಪರೀಕ್ಷೆಯ ವರದಿ ಬಂದಿದ್ದು, ಅತ್ಯಾಚಾರದ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ. ಆದರೆ, ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂಬುದು ವರದಿಯಿಂದ ತಿಳಿದುಬಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಈ ಪ್ರಕರಣ ಸಂಬಂಧ ಐವರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ(ಎಸ್ಎಸ್‌ಪಿ) ಮುನಿರಾಜ್‌ ಅವರು ತಿಳಿಸಿದರು.

ಭಾನುವಾರ 16 ವರ್ಷದ ಬಾಲಕಿಯ ಶವ ಅಕ್ರಾಬಾದ್ ಪ್ರದೇಶದಲ್ಲಿ ಪತ್ತೆಯಾಗಿತ್ತು. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗುತ್ತಿರುವಾಗ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಇನ್‌ಸ್ಪೆಕ್ಟರ್‌ ಪ್ರಣೇಂದ್ರ ಕುಮಾರ್ ಅವರು ಗಾಯಗೊಂಡಿದ್ದರು.

‘ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಕುಟುಂಬದವರು ದೂರಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರದ ಯಾವುದೇ ಸ್ಪಷ್ಟ ‍ಪುರಾವೆಗಳು ಸಿಕ್ಕಿಲ್ಲ. ಬಾಲಕಿಯ ಮೈ ಮೇಲೆ ಹಲವು ಗಾಯಗಳಾಗಿವೆ. ಆಕೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ’ ಎಂದು ಅವರು ಹೇಳಿದರು.

ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ. ಸೋಮವಾರ ಬಾಲಕಿಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ‌ಈ ವೇಳೆ ಬಾಲಕಿಯ ಮನೆಯ ಮುಂದೆ ಹಲವಾರು ಪ್ರತಿಭಟನಕಾರರು ಸೇರಿದ್ದರು’ ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು