ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗಳ ಬಂಧನ

Last Updated 22 ಫೆಬ್ರುವರಿ 2021, 8:59 IST
ಅಕ್ಷರ ಗಾತ್ರ

ಮಹೋಬಾ: ಪರಿಶಿಷ್ಟ ಜಾತಿಗೆ ಸೇರಿದ ‘16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಸೋಮವಾರ ತಿಳಿಸಿದರು.

ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬಾಲಕಿ ತನ್ನ ಮನೆಯ ಮುಂದೆ ನಿಂತಿದ್ದ ವೇಳೆ ಆರೋಪಿಗಳು ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ. ಬಾಲಕಿ ತನ್ನ ಅಕ್ಕನಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಅಕ್ಕ ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ಸುನಿಲ್‌ ಕುಮಾರ್‌ ತಿವಾರಿ ಅವರು ಮಾಹಿತಿ ನೀಡಿದರು.

‘ಜೈ ಹಿಂದ್‌(23) ಮತ್ತು ಆಶಿಷ್‌ ಸೇನ್‌(22) ಎಂಬವರನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT