ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಅಂಬೇಡ್ಕರ್ ಪೋಸ್ಟರ್ ತೆಗೆಯಲು ಆಕ್ಷೇಪಿಸಿದ ದಲಿತ ಯುವಕನ ಕೊಲೆ

Last Updated 10 ಜೂನ್ 2021, 10:11 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಹನುಮನ್‌ಗಡ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಸ್ಟರ್‌ ಅನ್ನು ತೆಗೆಯಲು ಆಕ್ಷೇಪ ವ್ಯಕ್ತಪಡಿಸಿದ ಕಾರಣಕ್ಕೆ ದಲಿತ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಜೂನ್ 5ರಂದು ಭೀಮ್ ಸೇನೆಯ ಸದಸ್ಯರಾಗಿದ್ದ ವಿನೋದ್‌ ಬಾಮ್ನಿಯಾ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನೋದ್‌, ತಮ್ಮ ಮನೆಯ ಗೋಡೆಯ ಮೇಲೆ ಅಂಬೇಡ್ಕರ್‌ ಪೋಸ್ಟರ್‌ವೊಂದನ್ನು ಅಂಟಿಸಿದ್ದರು. ಅವುಗಳನ್ನು ತೆರವುಗೊಳಿಸುವಂತೆ ಇತರೆ ಸಮುದಾಯದ ಯುವಕರ ಗುಂಪೊಂದು ಆಗ್ರಹಿಸಿತ್ತು. ಇದಕ್ಕೆ ವಿನೋದ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವೇಳೆ ಮಾತಿನ ಚಕಮಕಿ ನಡೆದಿದ್ದು, ವಿನೋದ್‌ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು.

ಘಟನೆ ಬಳಿಕ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT