ಬುಧವಾರ, ಏಪ್ರಿಲ್ 14, 2021
23 °C
ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಘಟನೆ

ಮಗಳ ಮೇಲಿನ ಲೈಂಗಿಕ ಕಿರುಕುಳದ ವಿರುದ್ಧ ತಿರುಗಿಬಿದ್ದ ಮಹಿಳೆ ಮೇಲೆ ಹಲ್ಲೆ: ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖನೌ: ಹದಿಹರೆಯದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕರ ವಿರುದ್ಧ ಅವರ ಕುಟುಂಬಗಳಿಗೆ ದೂರು ನೀಡಿದ್ದ ದಲಿತ ಯುವತಿಯ ತಾಯಿಯನ್ನು ತೀವ್ರವಾಗಿ ಥಳಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಜಿಲ್ಲೆಯ ಬುವಾಪುರ್ ಗ್ರಾಮದಲ್ಲಿ ನಡೆದಿದೆ.

‘ಬುವಾಪುರ್ ಗ್ರಾಮದಲ್ಲಿನ ದಲಿತ ಯುವತಿ ಬುಧವಾರ ತಮ್ಮ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತವಾಗಿದ್ದಾಗ ಅದೇ ಗ್ರಾಮದ ನಿವಾಸಿಗಳಾದ ಮೂವರು ಯುವಕರು, ಯುವತಿಯ ಬಟ್ಟೆಗಳನ್ನು ಹರಿದು ಅತ್ಯಾಚಾರಕ್ಕೆ ಯತ್ನಿಸಿದ್ದರು. ಆದರೆ, ಯುವಕರಿಂದ ಪಾರಾಗಿ ಬಂದ ಯುವತಿ ಮನೆಗೆ ಓಡಿಹೋಗಿ ತನ್ನ ತಾಯಿಗೆ ವಿಷಯ ತಿಳಿಸಿದ್ದಳು’ ಎಂದು ಪೊಲೀಸರು ಹೇಳಿದ್ದಾರೆ.

‘ಯುವತಿಯ ತಾಯಿ, ಮೂವರು ಯುವಕರ ಮನೆಗಳಿಗೆ ತೆರಳಿ ಅವರ ಪೋಷಕರಿಗೆ ದೂರಿದ್ದರು. ಇದರಿಂದ ಕುಪಿತಗೊಂಡಿದ್ದ ಯುವಕರು, ಯುವತಿಯ ತಾಯಿಯನ್ನು ಸಾಯುವಂತೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಆಕೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಕಾರಣರಾದ ಯುವಕರನ್ನು ಅಮನ್, ತಾಲಿಬ್ ಮತ್ತು ಕೌಶಲ್ ಎಂದು ಗುರುತಿಸಲಾಗಿದ್ದು ಅವರನ್ನು ಬಂಧಿಸಲಾಗಿದೆ. ಘಟನೆಯ ನಂತರ ಗ್ರಾಮದಲ್ಲಿ  ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಮೌಯಿಮಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು