ಗುರುವಾರ , ಅಕ್ಟೋಬರ್ 29, 2020
28 °C

ದಲಿತ ಯುವತಿ ಮೇಲೆ ಅತ್ಯಾಚಾರ ಉಸಿರುಗಟ್ಟಿಸಿ ಕೊಲೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾರಾಬಂಕಿ (ಉತ್ತರಪ್ರದೇಶ): ಇಲ್ಲಿನ ಸಾತ್ರಿಖ್‌ ಠಾಣೆ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 18 ವರ್ಷದ ದಲಿತ ಯುವತಿಯ ಶವಪತ್ತೆಯಾಗಿದೆ. ಅತ್ಯಾಚಾರ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್.ಗೌತಮ್ ಅವರು, ಕೃತ್ಯದ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತಳ ತಂದೆ ದೂರು ನೀಡಿದ್ದು, ಜಮೀನಿಗೆ ಹೋಗಿದ್ದ ಮಹಿಳೆ ಮರಳಿ ಬರಲಿಲ್ಲ. ಬಳಿಕ ಅವಳ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮಕ್ಕೆ ಪೊಲೀಸರ ತಂಡ ತೆರಳಿ, ಸ್ಥಳ ಪರಿಶೀಲನೆ ನಡೆಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.