ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

Last Updated 22 ಆಗಸ್ಟ್ 2021, 16:40 IST
ಅಕ್ಷರ ಗಾತ್ರ

ಶಾಹಜಾನ್‌ಪುರ: ಇಲ್ಲಿನ ಗ್ರಾಮವೊಂದರಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ತಿಲ್ಹಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂಜಯ್ ಕುಮಾರ್ ಮಾತನಾಡಿ, ಯುವತಿಯು ದನಗಳನ್ನು ಮೇಯಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಮನೆಗೆ ಹಿಂದಿರುಗಿದ ನಂತರ ಯುವತಿ ತನ್ನ ಕುಟುಂಬ ಸದಸ್ಯರಿಗೆ ಅತ್ಯಾಚಾರ ನಡೆದಿರುವ ಕುರಿತು ತಿಳಿಸಿದ್ದಾಳೆ. ಈ ಸಂಬಂಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT