ಭಾನುವಾರ, ಸೆಪ್ಟೆಂಬರ್ 25, 2022
21 °C

ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ವಯನಾಡ್: ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಇಬ್ಬರು ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಎರಡು ತಿಂಗಳ ಹಿಂದೆ ಎಸ್‌ಎಫ್‌ಐ (ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ) ಕಾರ್ಯಕರ್ತರು ನಡೆಸಿದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ ಎಸಗಲಾಗಿತ್ತು.

ನಾಲ್ವರನ್ನು ಬಂಧಿಸಿರುವುದಾಗಿ ಪೊಲೀಸರು ಖಚಿತಪಡಿಸಿದ್ದಾರೆ. ಬಂಧಿತರ ಪೈಕಿ ಇಬ್ಬರು ರಾಹುಲ್ ಗಾಂಧಿ ಅವರ ಕಚೇರಿಯ ಸಿಬ್ಬಂದಿ ಎಂಬುದನ್ನು ಕಾಂಗ್ರೆಸ್ ಮೂಲಗಳು ದೃಢಪಡಿಸಿವೆ. ಇನ್ನಿಬ್ಬರು ಪಕ್ಷದ ಕಾರ್ಯಕರ್ತರು ಎಂದು ಮೂಲಗಳು ಹೇಳಿವೆ.

‘ಜೂನ್ 24ರಂದು ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು. ಆ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರ ಕಚೇರಿಯಲ್ಲಿದ್ದ ಮಹಾತ್ಮ ಗಾಂಧಿ ಭಾವಚಿತ್ರಕ್ಕೂ ಹಾನಿ ಮಾಡಲಾಗಿತ್ತು’ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಎಸ್‌ಎಫ್‌ಐ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ ವಿಡಿಯೊವನ್ನು ಜೂನ್ 24ರಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು