ಮಂಗಳವಾರ, ಜನವರಿ 18, 2022
15 °C

ದೇಶದ ಎಲ್ಲ ರಾಜ್ಯಗಳಲ್ಲೂ ಕೋವಿಡ್ 3ನೇ ಅಲೆಗೆ ಓಮೈಕ್ರಾನ್ ಕಾರಣ: ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಎಲ್ಲ ರಾಜ್ಯಗಳಲ್ಲೂ ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆಗೆ ವೇಗವಾಗಿ ಹರಡುತ್ತಿರುವ ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಕಾರಣ ಎಂದು ಇತ್ತೀಚಿನ ಡೇಟಾವನ್ನು ಉಲ್ಲೇಖಿಸಿ ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ, ದೇಶದ ಪಶ್ಚಿಮ ಭಾಗದಲ್ಲಿ ಮಾತ್ರ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಓಮೈಕ್ರಾನ್ ಕಾರಣವಾಗಿತ್ತು. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಡೆಲ್ಟಾ ರೂಪಾಂತರವು ಪ್ರಧಾನವಾಗಿತ್ತು.

ಆದರೆ, ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದ ಪೂರ್ವ ಭಾಗದ ಎಲ್ಲ ರಾಜ್ಯಗಳಲ್ಲೂ ಹೆಚ್ಚಿನ ಸಂಖ್ಯೆಯ ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮೂಲವೊಂದು ತಿಳಿಸಿದೆ.

‘ಆದ್ದರಿಂದ ಎಲ್ಲಾ ರಾಜ್ಯಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆಯು ವೇಗವಾಗಿ ಹರಡುವ ಓಮೈಕ್ರಾನ್ ರೂಪಾಂತರದಿಂದ ಆಗುತ್ತಿದೆ ಎಂದು ಹೇಳಬಹುದು’ಎಂದು ಮೂಲಗಳು ತಿಳಿಸಿವೆ.

ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಒಂದೇ ದಿನದಲ್ಲಿ 1,41,986 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,53,68,372ಕ್ಕೆ ಏರಿದೆ.

ಈ ಮಧ್ಯೆ, ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮಾರ್ಗಸೂಚಿಗಳ ಪಾಲನೆ ಮತ್ತು ಗುಂಪು ಸೇರುವುದನ್ನು ತಪ್ಪಿಸುವಂತೆ ಜನರನ್ನು ಒತ್ತಾಯಿಸಿದೆ.

ಕೋವಿಡ್ -19 ಕಾರಣದಿಂದಾಗಿ ಆಸ್ಪತ್ರೆಯ ದಾಖಲಾತಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಯಾವುದೇ ಕೊರತೆಯನ್ನು ತಪ್ಪಿಸಲು ಆಸ್ಪತ್ರೆಗಳ ಸೌಲಭ್ಯಗಳು ಸೇರಿದಂತೆ ಮೂಲ ಸೌಕರ್ಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು