ನವದೆಹಲಿ:ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆಯಡಿ, ಅವಿಭಕ್ತ ಕುಟುಂಬದ ಹೆಣ್ಣುಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮುನ್ನ ಒಂದು ವೇಳೆ ತಂದೆ ತೀರಿಕೊಂಡಿದ್ದರೂ, ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಹ ಸಮಾನ ಹಕ್ಕು ಹೊಂದಿರುತ್ತಾರೆ. ಈ ಕಾಯ್ದೆ ಪೂರ್ವಾನ್ವಯ ಆಗಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಸ್.ನಜೀರ್ ಹಾಗೂ ಎಂ.ಆರ್.ಶಾ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಕಾಯ್ದೆಯು ತಿದ್ದುಪಡಿಗೊಂಡು ಜಾರಿಗೆ ಬಂದ ನಂತರ ಅಥವಾ ಅದಕ್ಕೂ ಮೊದಲೇ ಜನಿಸಿದ ಗಂಡು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಮೇಲೆ ಯಾವ ಹಕ್ಕುಗಳಿವೆಯೋ ಅವೇ ಹಕ್ಕುಗಳು ಹೆಣ್ಣುಮಕ್ಕಳಿಗೂ ಇವೆ’ ಎಂದು ನ್ಯಾಯಪೀಠ ಹೇಳಿದೆ.

‘ಈ ಕಾಯ್ದೆಯು ನೀಡಿರುವ ಹಕ್ಕುಗಳಿಂದ ಹೆಣ್ಣುಮಕ್ಕಳು ವಂಚಿತರಾಗಬಾರದು. ಹೀಗಾಗಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳ ಒಳಗಾಗಿ ಇತ್ಯರ್ಥಪಡಿಸಬೇಕು’ ಎಂದೂ ನ್ಯಾಯಪೀಠ ಸೂಚಿಸಿತು.

Supreme Court said that daughters will have the right over parental property even if the coparcener had died prior to the coming into force of the Hindu Succession (Amendment) Act, 2005. https://t.co/KibABSasCp
— ANI (@ANI) August 11, 2020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.