ಬುಧವಾರ, ಆಗಸ್ಟ್ 10, 2022
25 °C
18 ವರ್ಷ ಮೇಲ್ಟಟ್ಟವರಿಗೆ ತುರ್ತು ಸಂದರ್ಭದಲ್ಲಿ ನೀಡಿಕೆ

‘ಎಂಆರ್‌ಎನ್‌ಎ ಕೋವಿಡ್‌ ಲಸಿಕೆ’ ಬಳಕೆಗೆ ಡಿಸಿಜಿಐ ಅನುಮೋದನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ದೇಶೀಯವಾಗಿಯೇ ಅಭಿವೃದ್ಧಿಪಡಿಸಲಾಗಿರುವ ‘ಎಂಆರ್‌ಎನ್‌ಎ’ ಆಧಾರಿತ ಕೋವಿಡ್‌ ಲಸಿಕೆಯನ್ನು 18 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಿಗಾಗಿ ಸೀಮಿತವಾಗಿ ತುರ್ತು ಸಂದರ್ಭದಲ್ಲಿ ನೀಡಲು ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ) ಮಂಗಳವಾರ ಅನುಮೋದನೆ ನೀಡಿದ್ದಾರೆ.

ಜಿನ್ನೋವಾ ಬಯೋಫಾರ್ಮಾಸ್ಯೂಟಿಕಲ್ಸ್ ಕಂಪನಿ ಈ ಲಸಿಕೆಯನ್ನು ತಯಾರಿಸಿದ್ದು, 2–8 ಡಿಗ್ರಿ ಸೆಲ್ಸಿಯಸ್‌ ತಾಪಮಾನದಲ್ಲಿ ಈ ಲಸಿಕೆಯನ್ನು ಶೇಖರಿಸಿ ಇಡಬಹುದು ಎಂದು ಮೂಲಗಳು ಹೇಳಿವೆ.

7 ರಿಂದ 11 ವರ್ಷದೊಳಗಿನ ಮಕ್ಕಳಿಗೆ, ಸಿಐಐನ ಕೋವಿಡ್‌ ಲಸಿಕೆ ‘ಕೊವೊವ್ಯಾಕ್ಸ್‌’ ಅನ್ನು ಕೆಲವು ನಿಬಂಧನೆಗಳಿಗೆ ಒಳಪಟ್ಟು ತುರ್ತು ಸಂದರ್ಭದಲ್ಲಿ ನೀಡಲು ಸಹ ಡಿಸಿಜಿಐ ಅನುಮೋದನೆ ನೀಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.