ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿವುಡ, ಮೂಕ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರು ಬಾಲಕರ ಬಂಧನ

Last Updated 30 ಸೆಪ್ಟೆಂಬರ್ 2021, 15:51 IST
ಅಕ್ಷರ ಗಾತ್ರ

ಶಹದೋಲ್‌ (ಪಿಟಿಐ): ಮಧ್ಯಪ್ರದೇಶದ ಶಹದೋಲ್‌ ಜಿಲ್ಲೆಯ ಗ್ರಾಮವೊಂದರಲ್ಲಿ 13 ವರ್ಷದ ಶ್ರವಣದೋಷವುಳ್ಳ ಬಾಲಕಿ ಮೇಲೆ ನಾಲ್ವರು ಬಾಲಕರು ಸೇರಿ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಸೆಪ್ಟೆಂಬರ್‌ 25 ರಂದು ಈ ಘಟನೆ ನಡೆದಿದೆ. ಸಂತ್ರಸ್ತೆಯ ತಾಯಿ ಗುರುವಾರ ದೂರು ನೀಡಿದ ನಂತರ ಆರೋಪಿಗಳನ್ನು ಸೆರೆಹಿಡಿಯಲಾಗಿದೆ ಎಂದು ಶಹದೋಲ್‌ ವಲಯದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿ) ದಿನೇಶ್‌ ಚಂದ್ರ ಸಾಗರ್‌ ತಿಳಿಸಿದ್ದಾರೆ.

ಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತೆ ಬಾಲಕಿಯನ್ನು ಗ್ರಾಮದ ಕೋಣೆಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಅಲ್ಲಿದ್ದ ಇತರ ಆರೋಪಿಗಳೂ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಗ್ರಾಮಕ್ಕೆ ಸೇರಿದವರು ಎಂದು ಎಡಿಜಿ ಹೇಳಿದ್ದಾರೆ.

‘ಘಟನೆ ನಂತರ ಸಂತ್ರಸ್ತೆ ಆಘಾತಕ್ಕೆ ಒಳಗಾಗಿದ್ದಳು. ಕೆಲವು ದಿನಗಳ ನಂತರ ಆಕೆಯು ತನ್ನ ತಾಯಿಗೆ ಸಂಕೇತ ಭಾಷೆಯ ಮೂಲಕ ಘಟನೆಯನ್ನು ವಿವರಿಸಿದಳು. ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿ ನಾಲ್ವರು ಬಾಲಕರು’ ಎಂದು ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ಮೇಲೆ ಪೋಕ್ಸೊ ಹಾಗೂ ಐಪಿಸಿಯ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT