ಭಾನುವಾರ, ಅಕ್ಟೋಬರ್ 2, 2022
18 °C

ಬಾಂಬ್‌ ಹಾಕಿ ಸಿಎಂ ಯೋಗಿ ಹತ್ಯೆ ಮಾಡುವುದಾಗಿ ಪೊಲೀಸರಿಗೇ ಬೆದರಿಕೆ ಸಂದೇಶ: ಪ್ರಕರಣ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಲಖನೌ:  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಪೊಲೀಸ್‌ ಸಹಾಯವಾಣಿಯ ವಾಟ್ಸ್‌ಆ್ಯಪ್‌ಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ಪ್ರಕರಣ ದಾಖಲಿಸಲಾಗಿದೆ.

ಇಲ್ಲಿನ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಕಮಾಂಡರ್ ಸುಭಾಷ್ ಕುಮಾರ್ ಅವರು ಎಫ್‌ಐಆರ್ ದಾಖಲಿಸಿದ್ದಾರೆ.

ಪೊಲೀಸ್‌ ಇಲಾಖೆಯ ‘112 ’ ಸಹಾಯವಾಣಿಯ ವಾಟ್ಸ್‌ಆ್ಯಪ್‌ಗೆ ಶಾಹಿದ್ ಎಂಬ ವ್ಯಕ್ತಿಯಿಂದ ಸಂದೇಶ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಬಾಂಬ್ ಹಾಕಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿದ್ದು, ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಬರ್ ವಿಭಾಗ ಮತ್ತು ವಿಚಕ್ಷಣ ದಳದ ಅಧಿಕಾರಿಗಳು ಸಂದೇಶ ಕಳುಹಿಸಿದವರ ಪತ್ತೆಗೆ ಜಾಲ ಬೀಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು