ಶುಕ್ರವಾರ, ಆಗಸ್ಟ್ 12, 2022
25 °C

ಕೋವಿಡ್ ಸಾವಿನ ಲೆಕ್ಕಾಚಾರ: ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಜತೆಗೆ ಇತರ ಅಸ್ವಸ್ಥತೆಗಳಿಂದ ಮೃತಪಟ್ಟಿರುವುದನ್ನೂ ಕೋವಿಡ್ ಸಾವು ಎಂದೇ ಪರಿಗಣಿಸಲಾಗಿದೆ. 2020ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ಮಾರ್ಗಸೂಚಿ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಆದರೆ, ಸಾವಿಗೆ ಖಚಿತವಾಗಿ ಬೇರೆ ಕಾರಣಗಳಿದ್ದ ಸಂದರ್ಭದಲ್ಲಿ, ಉದಾಹರಣೆಗೆ ಆಕಸ್ಮಿಕ ಆಘಾತ, ವಿಷ ಸೇವನೆ, ಮೊದಲೇ ತೀವ್ರ ಎದೆನೋವು ಇದ್ದವರಲ್ಲಿ ಕೋವಿಡ್ ದೃಢಪಟ್ಟಿದ್ದರೂ ಅಂಥವನ್ನು ಕೋವಿಡ್ ಸಾವು ಎಂದು ಪರಿಗಣಿಸಿಲ್ಲ ಎಂದೂ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಗೃಹ ಸಚಿವಾಲಯ ಉಲ್ಲೇಖಿಸಿದೆ.

ಓದಿ: 

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಿದ್ಧಪಡಿಸಿರುವ ಮಾರ್ಗಸೂಚಿಯ ಉಲ್ಲಂಘನೆಯು ಭಾರತೀಯ ದಂಡ ಸಂಹಿತೆಯ (ಐಪಿಸಿ) 188ನೇ ಸೆಕ್ಷನ್ ಅಡಿ ಅಪರಾಧವಾಗುತ್ತದೆ ಎಂದು ಕೇಂದ್ರ ಹೇಳಿದೆ.

ಕೋವಿಡ್ ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ಸಂಭವಿಸಿದ ಸಾವನ್ನು ಕೋವಿಡ್ ಸಾವು ಎಂದೇ ಪರಿಗಣಿಸುವಂತೆ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದೂ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಸಾವಿನ ಲೆಕ್ಕಾಚಾರ ಮತ್ತು ಮರಣ ಪ್ರಮಾಣಪತ್ರ ನೀಡಿಕೆ ನಡುವಣ ವ್ಯತ್ಯಾಸಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ 2020ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು