ಗುರುವಾರ , ಸೆಪ್ಟೆಂಬರ್ 23, 2021
26 °C

ರೈತರ ಸಾಲ ಹೆಚ್ಚಾಗಿದೆ, ಆದಾಯವಲ್ಲ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರೈತರ ಸಾಲ ಹೆಚ್ಚಾಗಿದೆ. ಆದರೆ ಆದಾಯದಲ್ಲಿ ಹೆಚ್ಚಳವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

2018ರ ವರೆಗಿನ ಐದು ವರ್ಷಗಳಲ್ಲಿ ರೈತ ಕುಟುಂಬಗಳ ಸಾಲವು ಸರಾಸರಿ ಶೇಕಡಾ 57ರಷ್ಟು ಹೆಚ್ಚಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ಟೀಟ್ ಮಾಡಿದ್ದಾರೆ.

ಇದನ್ನೂ ಓದಿ: 

 

 

 

'ರೈತರ ಆದಾಯ ಹೆಚ್ಚಾಗಲಿಲ್ಲ. ಆದರೆ ಸಾಲ ಹೆಚ್ಚಾಗಿದೆ. ದೇಶವನ್ನು ಪೋಷಿಸುವರು ತನ್ನ ಕುಟುಂಬಕ್ಕೆ ಆಹಾರವನ್ನು ತುಂಬಲು ಸಾಧ್ಯವಾಗದಿದ್ದಾಗ ಏನು ಮಾಡುವುದು?' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

ಈ ಮೊದಲು ನಿರುದ್ಯೋಗದ ಬಗ್ಗೆ ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಕೇಂದ್ರ ಸರ್ಕಾರವು 'ಆತ್ಮನಿರ್ಭರ್' ಕರಾಳ ನಗರವನ್ನಾಗಿ ಮಾಡಿದೆ ಎಂದು ವ್ಯಂಗ್ಯವಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು